Ravi Belagere
Welcome to my website
ಈಗ ಒಂದು ವರ್ಷದ ಹಿಂದೆ 'ಕಾಮರಾಜ ಮಾರ್ಗ' ಪುಸ್ತಕ ಬಿಡುಗಡೆಯಾಗಿತ್ತು. ರವೀಂದ್ರ ಕಲಾಕ್ಷೇತ್ರ ತುಂಬಿ ತುಳುಕಿ ಹಿಂಬದಿಯ ಸಂಸ ಬಯಲು ರಂಗ ಮಂದಿರವೂ ಭರ್ತಿಯಾಗಿತ್ತು. `ಕಾಮರಾಜ ಮಾರ್ಗ' ಹೆಚ್ಚು ಕಡಿಮೆ ಬಿಜೆಪಿ ನಾಯಕರ ಕಥೆಯಾಗಿತ್ತು. ಇದೇ ಡಿಸೆಂಬರ್ ನಲ್ಲಿ ಬಿಡುಗಡೆಯಾಗುತ್ತಿರುವ `ಹಿಮಾಗ್ನಿ' ಸೋನಿಯಾ ಗಾಂಧಿ ಸುತ್ತ ಹೆಣೆದ ಬೃಹತ್ ಕಾಬಂದರಿ. ಜೊತೆಗೆ 'ಉಡುಗೊರೆ', 'ಖಾಸ್ ಬಾತ್ 2004', 'ಬಾಟಮ್ ಐಟಮ್ 6' ಹೀಗೆ ಸಾಲು ಸಾಲು ಪುಸ್ತಕಗಳು ತಾಯಾರಿವೆ. ಅಷ್ಟೇ ಅಲ್ಲದೇ ಅರವತ್ತು ನಿಮಿಷಗಳ ಸಿ.ಡಿ ಬಿಡುಗಡೆ ಮಾಡೋಣವೆಂದುಕೊಂಡಿರುವೆ.
Home About Us Gallery Books Feedback Prarthana Contact Us

ಗಣಿ ದಂಧೆಯೆಂಬ ಕುಬೇರ ತಿಜೋರಿಯ ಕೀಲಿ ಕೈ ಒಯ್ದದ್ದು ಹೈದರಾಬಾದ್ ಜೈಲಿಗೆ!

ಸುದ್ದಿಗೆ ಪ್ರವಾಹ.

ಕರ್ನಾಟಕ ಮತ್ತು ಇಡೀ ದೇಶ ಒಟ್ಟೊಟ್ಟಿಗೆ ಸುದ್ದಿಯ ಪ್ರವಾಹ ಎದುರಿಸುತ್ತಿವೆ. ಸ್ಪೆಕ್ಟ್ರಂ ಹಗರಣದಲ್ಲಿ ರಾಜಾ ಹಾಗೂ ಕನ್ನಿಮೊಳಿ, ಆಟ ಕೆಡಿಸಿದ ಆಪಾದನೆಯ ಮೇಲೆ ಕಲ್ಮಾಡಿ, ಗಪ್ಪನೆ ಕೋರ್ಟಿನ ಕೈಗೆ ಸಿಕ್ಕು ಜೈಲು ಪಾಲಾದ ಕಟ್ಟಾ ಸುಬ್ರಹ್ಮಣ್ಯನಾಯ್ಡು ಮತ್ತು ಆತನ ಮಗ, ಜೈಲಿನೆಡೆಗೆ ಮುಖ ಮಾಡಿಕೊಂಡೇ ನಿಂತಿರುವ ಯಡಿಯೂರಪ್ಪ, ಆತನ ಮಕ್ಕಳು, ಎಚ್.ಡಿ.ಕುಮಾರ ಸ್ವಾಮಿ ದಂಪತಿಗಳು, ಓಟಿಗಾಗಿ ನೋಟು ಪ್ರಕರಣದಲ್ಲಿ ಬೋನಿಗೆ ಬಿದ್ದ ಅಮರ್ ಸಿಂಗ್, ಶ್ರೀರಾಮುಲು ರಾಜಿ ನಾಮೆ ಪ್ರಹಸನ, ದಿಲ್ಲಿ ಹೈಕೋರ್ಟಿನ ಹತ್ಯಾಕಾಂಡ ಮತ್ತು ಜನಾರ್ದನ ರೆಡ್ಡಿಯ ಬಂಧನ...

ಒಂದೆರಡೇ?

ಜನಾರ್ದನ ರೆಡ್ಡಿಯನ್ನು ಸಿ.ಬಿ.ಐ ಪೊಲೀಸರು ಹೆಚ್ಚಿನ fuss ಮಾಡದೆ ಬಳ್ಳಾರಿಯ 'ಕುಟೀರ'ದಿಂದ ಎತ್ತಿ ಕೊಂಡು ಹೋಗುವುದರೊಂದಿಗೆ ಒಂದು ಆಟ ಮುಗಿ ದಿದೆ. ಖೇಲ್ ಖತಂ! ಆದರೆ ಇನ್ನೊಂದು ಆಟ ಆರಂಭ ವಾಗಿದೆ. ಬಳ್ಳಾರಿಯನ್ನು ಅಕ್ಷರಶಃ ತನ್ನ ಚಕ್ರಬಿಂಬ ಕೋಟೆ ಯಂತಾಗಿಸಿಕೊಂಡು ಆಳಿದವನು ಜನಾರ್ದನ ರೆಡ್ಡಿ. ಈ ಹಿಂದಾದರೂ ಅದು ಒಬ್ಬರಲ್ಲ ಒಬ್ಬರ ಕಪಿ ಮುಷ್ಟಿಯಲ್ಲಿದ್ದ ಚಕ್ರಬಿಂಬನ ಕೋಟೆಯೇ. ಅಲ್ಲಿ ಪ್ರಜಾ ಪ್ರಭುತ್ವವೆಂಬುದು ಇವತ್ತಿಗೂ ಅಪರಿಚಿತ. ಹಿಂದಿದ್ದ ಪಾಳೇಗಾರರು ಮನುಷ್ಯರ ರುಂಡ ಕಡಿಯುತ್ತಿದ್ದರು. ಈಗಿನವರು ಬೆಟ್ಟ ಗುಡ್ಡಗಳ ರುಂಡ ಕಡಿದು, ಒಡಲು ಬಗೆದು, ಧೂಳು ಚಿಮ್ಮಿ, ದುಡ್ಡು ಚೆಲ್ಲಿ ಚಕ್ರಬಿಂಬನ ಕೋಟೆ ಆಳುತ್ತಾರೆ. ಇಷ್ಟೇ ವ್ಯತ್ಯಾಸ.

"ನೀವು ಮುಂಡ್ಲೂರು ಧಣಿಗಳನ್ನು ರಾಜಕೀಯ ವಾಗಿ ಹಣಿ ಯುವುದಕ್ಕಾಗಿ ರೆಡ್ಡಿಗಳಿಗೆ ಒಂದು social acceptance ಕೊಡಿಸಿದಿರಿ. ಅದು ನೀವು ಮಾಡಿದ ತಪ್ಪು" ಎಂಬುದಾಗಿ ನನ್ನ ಓದುಗ ಮಿತ್ರ ಆದಿತ್ಯ ಭಾರ ದ್ವಾಜ್ ಆರೋಪಿಸುತ್ತಾರೆ. ಇದು ನನ್ನ ಮೇಲಿರುವ ಆಪಾದನೆ. ಮತ್ತು ಇದು ನಿಜವೂ ಹೌದು. ಮುಂಡ್ಲೂರು ಮನೆತನದವರ ಆಳ್ವಿಕೆಯ ವಿರುದ್ಧ ನಾನು ೧೯೮೩ ರಿಂದಲೇ ದನಿಯೆತ್ತಿದವನು. ಅಲ್ಲಿನ ಬೀದಿಗಳಲ್ಲಿ ನಿಂತು ಹೋರಾಡಿದ್ದೇನೆ. ಪೊಲೀಸರು, ಲಾಕಪ್ಪು, ನ್ಯಾಯಾ ಲಯದಿಂದ ಶಿಕ್ಷೆ ಎಲ್ಲವೂ ಆಗಿದೆ. ನೋಡನೋಡುತ್ತ ನನ್ನ ಕಣ್ಣೆದುರಿನಲ್ಲೇ ಅನೇಕ ಮಿತ್ರರು, ಪರಿಚಿತರು, ಕಡೆಗೆ ನನ್ನ ವಿದ್ಯಾರ್ಥಿಯೂ ಕೊಲೆಯಾಗಿ ಹೋದ. ನನ್ನೊಂದಿಗೆ ಈ ಹತ್ಯೆ ರಾಜಕೀಯದ ವಿರುದ್ಧ ಹೋರಾ ಡುತ್ತಿದ್ದ ಕೆಲವರು ಕ್ರಮೇಣ ಮುಂಡ್ಲೂರು ಪಾಲಿಟಿಕ್ಸ್ ನೊಳಕ್ಕೇ ಲೀನವಾಗಿ ಬಿಟ್ಟರು. ಅವರ ಪೈಕಿ ಪ್ರಮುಖ ನಾದ ಯರ್ರಿಸ್ವಾಮಿ ತೀರಿಕೊಂಡೂ ಬಿಟ್ಟ. ತೋಳ್ಬಲದಲ್ಲಿ ನಮಗೆ ಸಮರಿಲ್ಲ ಎಂದು ಬೀಗುತ್ತಿದ್ದ ಧಣಿಗಳ ಜೊತೆಗೆ ಸಂಡೂರಿನ ಮಹಾ ಕುಬೇರ ಅನಿಲ್‌ಲಾಡ್ ಸೇರಿ ಕೊಂಡುಬಿಟ್ಟ. ಆಗಲೇ ನಾನು ದಿಗಿಲಿಗೆ ಬಿದ್ದು ಬಳ್ಳಾರಿಗೆ ಹೋದದ್ದು. ಎಂದೂ ಒಬ್ಬರ ಪರವಾಗಿ, ಒಂದು ಪಕ್ಷದ ಪರವಾಗಿ ಓಟು ಕೇಳದಿದ್ದವನು 'ಬಳ್ಳಾರಿಯಲ್ಲಿ ಅನಿಲ್ ಲಾಡ್‌ನನ್ನು ಸೋಲಿಸಿ' ಅಂತ ಪ್ರಚಾರ ಮಾಡಿದೆ. ಆಗ ಸೋಮಶೇಖರ ರೆಡ್ಡಿ ಗೆದ್ದು ಬಂದ. ನಾನೊಬ್ಬನೇ ಅಲ್ಲ: ಹತ್ಯಾ ರಾಜಕೀಯದ ವಿರುದ್ಧ ಬೇಸತ್ತ, ಬಳ್ಳಾರಿಯ ಸಮಸ್ತರೂ ರೆಡ್ಡಿಗಳು ಗೆಲ್ಲಲಿ ಎಂದು ಬಯಸಿದ್ದರು. ನಿಮಗೆ ಗೊತ್ತಿರಲಿ, ಇದೇ ಶ್ರೀರಾಮುಲು ಮತ್ತು ರೆಡ್ಡಿ ಸೋದರರು ಬೈಕುಗಳಲ್ಲಿ ಹೋಗಿ ಅವತ್ತಿನದವತ್ತಿನ ಖರ್ಚಿಗಾಗಿ ಬಳ್ಳಾರಿಯಲ್ಲಿ ಕೆಲವು ಮಿತ್ರರಿಂದ ಸಾವಿರ- ಎರಡು ಸಾವಿರ ರುಪಾಯಿಗಳ ಕೈಗಡ ತಂದುಕೊಳ್ಳು ತ್ತಿದ್ದರು. ಅದು ನಿಜಕ್ಕೂ ಬದಲಾಗಿ ಒಂದೇ ಸಲಕ್ಕೆ ಮೈನಿಂಗ್ ಮತ್ತು ಅಕಾರ ರೆಡ್ಡಿಗಳ ಕೈಗೆ ಸೇರಿದ್ದು ಇಡೀ ನಕಾಶೆಯನ್ನೇ ಬದಲಿಸಿಬಿಟ್ಟಿತು. ಅನಿಲ್ ಲಾಡ್‌ನಂಥ ಕೆಲವೇ ಕುಬೇರರ ಕೈಲಿದ್ದ ತಿಜೋರಿಯ ಬೀಗದ ಕೈ ರೆಡ್ಡಿಯ ಕೈಗೆ ಸಿಕ್ಕು ಬಿಟ್ಟಿತು. ೧೯೯೯ರ ಸುಮಾರಿನಲ್ಲಿ ಸಿಕ್ಕ ತಿಜೋರಿಯ ಬೀಗ ಜನಾರ್ದನ ರೆಡ್ಡಿಯನ್ನು ೨೦೧೧ರ ಒಂಬತ್ತನೇ ತಿಂಗಳ ಹೊತ್ತಿಗೆ ಹೈದರಾಬಾದಿನ ಚಂಚಲಗೂಡ ಬಂದೀಖಾನೆಯಲ್ಲಿ ಕೂಡಿಸಿ, ಹೊರಗಿ ನಿಂದ ಕೀಲಿ ಹಾಕಿಕೊಂಡಿದೆ. ಇನ್ನು ಹೊರಬರುವುದು ಯಾವಾಗಲೋ?

ಸಿಬಿಐ ಎಂಬುದು ಕೆಲವು ಅಪರೂಪದ ಬುದ್ಧಿ ವಂತರ, ಹಣಕಾಸಿನ ವಿಚಾರದಲ್ಲಿ ನಿಷ್ಠಾವಂತರಾದ ಅಕಾರಿಗಳನ್ನು ಹೊಂದಿರುವ ಅತ್ಯಂತ ಚುರುಕಾದ ಸಂಸ್ಥೆ. ಒಂದು ರೇಡ್ ಮಾಡಿದರೆ ಕನಿಷ್ಠ ಮುನ್ನೂರು ಜನರನ್ನು ಅದಕ್ಕಾಗಿ ಕಣಕ್ಕಿಳಿಸುವ, ಚಿಕ್ಕದೊಂದು ಕಲ್ಲನ್ನೂ ತಿರುಗಿಸದೆ ಬಿಡದ, ಎಲ್ಲಿಂದ ಬೇಕಾದರೂ ಎವಿಡೆನ್ಸು ಕಲೆ ಹಾಕಬಲ್ಲ, ಯಾವ ಆಳವನ್ನೂ ಅಗೆದು ತಲಾಷು ಮಾಡಬಲ್ಲ ಸಮರ್ಥ ಸಂಘಟನೆ. ಅಂಥ ಸಂಸ್ಥೆಯೊಂದಿಗೆ ಜನಾರ್ದನ ರೆಡ್ಡಿಯೇ ಮೊದಲ ಬಾರಿಗೆ ಚಲಗಾಟ ಆರಂಭಿಸಿದ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ಮಾಡಿದ ೧೫೦ ಕೋಟಿ ಗಣಿ ಕಪ್ಪದ ಆರೋಪದೊಂದಿಗೇ ರೆಡ್ಡಿ ಸೋದರರ ಅಸಲಿ ಚಲ ಗಾಟ ಆರಂಭವಾಯಿತು. ರೆಡ್ಡಿಗಳಿಂದ ಈ ಕೆಲಸ ಮಾಡಿ ಸಿದ್ದು, ಅಂದು ಉಪ ಮುಖ್ಯಮಂತ್ರಿಯಾಗಿದ್ದ ಯಡಿ ಯೂರಪ್ಪ. ಇಪ್ಪತ್ತು ತಿಂಗಳ ನಂತರ ಅಕಾರ ಬಿಟ್ಟು ಕೊಡದೆ ಬಹುದೊಡ್ಡ ರಾಜಕೀಯ ತಪ್ಪು ಮಾಡಿದ ಕುಮಾರಸ್ವಾಮಿಯ ಕೈಲಿ ಆ ಕೆಲಸ ಮಾಡಿಸಿದ್ದು ದೇವೆಗೌಡರು.

ಎಂಥ ಪರಿಸ್ಥಿತಿ ನಿರ್ಮಾಣವಾಯಿತೆಂದರೆ, ರಾಜ್ಯದ ಇಡೀ ಲಿಂಗಾಯತ ಸಮೂಹ ಬಿಜೆಪಿಗೆ ಅಕಾರವನ್ನು ಕೈಯೆತ್ತಿಕೊಡಲು ಸಿದ್ಧವಾಗಿತ್ತು. ಧಾರಾಳವಾಗಿ ದುಡ್ಡು ಚೆಲ್ಲಲು ರೆಡ್ಡಿಗಳು ಸಿದ್ಧರಾಗಿದ್ದರು. ಅವರಿಂದ ಸಾವಿ ರಾರು ಕೋಟಿ ತಂದುಕೊಂಡು ಸಿಂಹಾಸನವೇರಲು ಯಡಿಯೂರಪ್ಪ ತಹತಹಿಸುತ್ತಿದ್ದ. ಇದೆಲ್ಲದರ ಅಂತಿಮ ಪರಿಣಾಮವೆಂದರೆ-ಯಡಿಯೂರಪ್ಪನಿಗೆ ಕುರ್ಚಿ, ಕುಮಾರ ಸ್ವಾಮಿಗೆ ಕಸದ ಬುಟ್ಟಿ, ಕಾಂಗ್ರೆಸ್ಸಿಗೆ ದೈನೇಸಿ ಸ್ಥಿತಿ ಮತ್ತು ರೆಡ್ಡಿಗೆ ಕುಬೇರನ ತಿಜೋರಿಯ ಕೀಲಿ ಕೈ-ಸಂದಾಯ ವಾದವು. ಬಳ್ಳಾರಿ ಜಿಲ್ಲೆಯನ್ನು ತುಂಡು ಗುತ್ತಿಗೆ ಆಧಾ ರದ ಮೇಲೆ ಜನಾರ್ದನ ರೆಡ್ಡಿಯ ಕೈಗೆ ಬಿಟ್ಟು ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ ಅದರಿಂದ ಕೋಟ್ಯಂ ತರ ರುಪಾಯಿ ಗೋರಿಕೊಂಡ. ಅಷ್ಟೇ ಅಲ್ಲ : ಆತ ರೆಡ್ಡಿ ಗಳಿಂದ ಹೊಸ ರಾಜಕೀಯ ಪಾಠ ಕಲಿತುಕೊಂಡ. ಪಾಠದ ಹೆಸರೇ ದುಡ್ಡು. ದುಡ್ಡಿದ್ದರೆ ಮಾತ್ರ ರಾಜ ಕಾರಣ ಮಾಡಬಹುದು ಮತ್ತು ದುಡ್ಡೊಂದಿದ್ದರೆ ಏನು ಬೇಕಾದರೂ ಮಾಡಬಹುದು! ಹಾಗಂತ ರೆಡ್ಡಿಗಳೇ ತೋರಿಸಿ ಕೊಟ್ಟಿದ್ದರು.

ತಮಾಷೆ ಕೇಳಿ : ಇವತ್ತು ಲೋಕಾಯುಕ್ತರು,

ಯು.ವಿ.ಸಿಂಗ್ ಅಥವಾ ಸಿ.ಬಿ.ಐ ಅಕಾರಿಗಳು ಏನೇನು ಸಾಕ್ಷ್ಯ ಸಂಗ್ರಹಿಸಿದ್ದೇವೆ ಅಂತ ಹೇಳಿಕೊಳ್ಳುತ್ತಿದ್ದಾರೋ, ಅವೆಲ್ಲವನ್ನೂ ಮೊದಲಬಾರಿಗೆ ಸಂಪಾದಿಸಿದ್ದು ಇನ್‌ಕಮ್ ಟ್ಯಾಕ್ಸ್ ಇಂಟೆಲಿಜೆನ್ಸ್ ವಿಭಾಗದ ಒಬ್ಬ ನಿಸ್ಪೃಹ ಅಕಾರಿ ಗುರುಪ್ರಸಾದ್ ಎಂಬುವವರು. ರೆಡ್ಡಿ ಮತ್ತು ಅವರ ಆಸುಪಾಸಿನವರ ವಿರುದ್ಧ ಈ ತನಕ ನಡೆಯು ತ್ತಿರುವ ತನಿಖೆಯ ಬೇರುಗಳಿರುವುದೇ ಟ್ಯಾಕ್ಸ್ ಅ ಕಾರಿ ಗುರುಪ್ರಸಾದ್ ನಡೆಸಿದ ದಾಳಿ ಮತ್ತು ಸಂಗ್ರಹಿ ಸಿದ ಸಾಕ್ಷ್ಯಗಳ ಆಧಾರದ ಮೇಲೆ. ಜನಾರ್ದನ ರೆಡ್ಡಿ ಯನ್ನು ಹಣಿಯಲಿಕ್ಕೆ ಸಲೀಸಾಗಿ ಸಿಕ್ಕಿರುವ ಎರಡು ಆಯುಧಗಳೆಂದರೆ ರೆಡ್ಡಿಯ ಆಪ್ತ ಸಿಬ್ಬಂದಿಯವನೇ ಆದ ಅಲೀಖಾನ್ ಮತ್ತು ಹೊಸಪೇಟೆಯ ಪರಮ ಕುಖ್ಯಾತ ಟ್ರಾನ್ಸ್‌ಪೋರ್ಟರ್ ಖಾರಪುಡಿ ಮಹೇಶ. ಇವರಿಬ್ಬರವೂ ಕಂತೆ ಕಂತೆ ದಾಖಲೆಗಳು, ಹಣದ ವಹಿವಾಟಿನ ವಿವರಗಳು ಸಿಕ್ಕು ಬಿದ್ದಿವೆ. ಇವರಿಗಿಂತ ದೊಡ್ಡ ಮಟ್ಟದಲ್ಲಿ ಗಾಲಿ ಜನಾರ್ದನ ರೆಡ್ಡಿಯ ವಿರುದ್ಧ ಸಾಕ್ಷ್ಯ ದೊರಕಿರುವುದು ಕೂಡ್ಲಿಗಿಯ ಶಾಸಕ ಗುಮ್ಮ ನೂರು ನಾಗೇಂದ್ರನ ಬ್ಯಾಂಕ್ ವಹಿವಾಟಿನಲ್ಲಿ. ಕೊನೆ ಯದಾಗಿ, ಜನಾರ್ದನ ರೆಡ್ಡಿಯನ್ನು ಸಿಕ್ಕಿ ಹಾಕಿಸಬಲ್ಲ ಹುಡುಗನೆಂದರೆ, ಕಂಪ್ಲಿಯ ಶಾಸಕ ಸುರೇಶ್ ಬಾಬು. ಬೆರಳೆಣಿಕೆಯಷ್ಟೇ ಜನರಿರುವ ಒಂದು ಪಟಾಲಂ ಜನಾ ರ್ದನ ರೆಡ್ಡಿಯನ್ನು ಕಾನೂನಿನ ಚಕ್ರಸುಳಿಗೆ ಸಿಲುಕಿಸಿ ಮುಳುಗಿಸಲಿದೆ.

ನಿಮಗೆ ಆಶ್ಚರ್ಯವೆನ್ನಿಸಬಹುದು. ಗಣಿಗಾರಿಕೆಯ ವ್ಯವಹಾರದಲ್ಲಿ ಜನಾರ್ದನ ರೆಡ್ಡಿ ತುಂಬ ಹಿಂದೆಯೇ ತನ್ನ ಸೋದರರಾದ ಸೋಮಶೇಖರ ರೆಡ್ಡಿ ಹಾಗೂ ಕರುಣಾಕರ ರೆಡ್ಡಿಯನ್ನು ದೂರವಿರಿಸಿದ್ದ. ಈ ಸೋದ ರರು ಅಕ್ಷರಶಃ ಕುಟುಂಬದ ಆಸ್ತಿ ಪಾಲು ಮಾಡಿಕೊಂಡು ವ್ಯವಹಾರಿಕವಾಗಿ ದೂರವಾಗಿದ್ದಾರೆ. ರಾಜಕೀಯದ ವಿಷಯಕ್ಕೆ ಬಂದರೆ ಶ್ರೀರಾಮುಲುವೂ ಸೇರಿದಂತೆ ಎಲ್ಲರೂ ಬಳ್ಳಾರಿ ಬ್ರದರ‍್ಸ್ ಅಥವಾ ರೆಡ್ಡಿ ಬ್ರದರ‍್ಸ್ ಅಂತಲೇ ಗುರುತಿಸಲ್ಪಡುತ್ತಾರೆ. ಮಾನಸಿಕವಾಗಿ ಅವರು ಒಟ್ಟಿಗಿದ್ದಾರೆಯೇ? ಗೊತ್ತಿಲ್ಲ. ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ ಎಂಬುದಂತೂ ನಿಜ.

ಇಂಥದೊಂದು ಕುಬೇರ ಮೂಲೆ ಹಿಡಿದು ಕುಳಿತ ಜನಾರ್ದನ ರೆಡ್ಡಿಯಿಂದ ಕಾಲ ಕಾಲಕ್ಕೆ ಸಾವಿರಾರು ಕೋಟಿ ರುಪಾಯಿ ಪಡೆದ ಯಡಿಯೂರಪ್ಪ ಇನ್ನೊಂ ದೆಡೆ, ಮುಖ್ಯಮಂತ್ರಿಯಾಗಿ ಕುಳಿತು ತಮ್ಮ ವರಮಾನ ಕ್ಕಾಗಿ ಸಾಕಷ್ಟು ದಾರಿ ಮಾಡಿಕೊಂಡಿದ್ದರು. ಆದರೆ ಅವರ ಮಕ್ಕಳು ಆಸೆಗೆ ಬಿದ್ದು ಅವಸರಗೇಡಿಗಳಾದರು. ಅದೇ ಗಣಿ ದುಕಾನದೊಳಕ್ಕೆ ಕಳ್ಳ ಕೈ ಇರಿಸಿ ಜಿಂದಾಲ್ ಸಂಸ್ಥೆಯ ಬಹುದೊಡ್ಡ ಕಳ್ಳರಿಂದ ನಲವತ್ತು ಕೋಟಿ ರುಪಾಯಿ ಹರಕೊಂಡು ತಿಂದು ಬಿಟ್ಟರು. ಅದೇ ಪ್ರೇರಣಾ ಟ್ರಸ್ಟ್‌ನ ಮಾನಗೇಡಿ ಹಗರಣ. ಪ್ರೇರಣಾ ಟ್ರಸ್ಟ್ ಹಗರಣವನ್ನು ರಹಸ್ಯ ವಾಗಿ ಬಯಲು ಮಾಡಿದ್ದೇ ಜನಾರೆಡ್ಡಿ! ಅದೇ ತರಹದ ಕೆಲಸ ಮಾಡಿ ಕುಮಾರಸ್ವಾಮಿ ಸಿಕ್ಕು ಬಿದ್ದಿರುವುದು ವಿನೋದ್ ಗೋಯಲ್‌ನ 'ಜಂತಕಲ್ ಮೈನ್ಸ್ ಪರ ವಾನಗಿ' ಹಗರಣದಲ್ಲಿ. ಅಕ್ರಮ ಗಣಿಗಾರಿಕೆ ಹಾಗೂ ಅದಿರು ಕಳ್ಳಸಾಗಣೆ ಹಗರಣದಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿರುವುದು ಹೌದಾದರೆ, ಆತನ ಪಕ್ಕದ ಬ್ಯಾರಕ್ ಗಳಲ್ಲಿ ಸಾಲುಸಾಲಾಗಿ ಯಡಿಯೂರಪ್ಪ, ಅನಿಲ್‌ಲಾಡ್, ಕುಮಾರಸ್ವಾಮಿ, ವಿಜಯೇಂದ್ರ, ರಾಘವೇಂದ್ರ, ಗುಮ್ಮ ನೂರು ನಾಗೇಂದ್ರ... ಹೀಗೆ ಅನೇಕರು ಹೋಗಿ ಕೂಡು ತ್ತಾರೆ. ಕೂಡ ಬೇಕು.

ಗಣಿ ದುಡ್ಡು ಎಂಬುದು ಇಡೀ ರಾಜ್ಯ ರಾಜಕಾರಣ ವನ್ನೇ ಬದಲಿಸಿತು, ದಿಕ್ಕು ತಪ್ಪಿಸಿತು. ಜನಾರ್ದನ ರೆಡ್ಡಿಯ 'ಸಿರಿವಂತಿಕೆ'ಯಲ್ಲಿ ಪಾಲು ತಿನ್ನಲು ಹೋಗಿ ಅನೇಕರು ಸಿಕ್ಕು ಬಿದ್ದರು. ಗಾಲಿ ಜನಾರ್ದನ ರೆಡ್ಡಿ ಎಲ್ಲರನ್ನು ಎಳೆದು ಕೊಂಡೇ ಹಳ್ಳಕ್ಕೆ ಬಿದ್ದ. ಇವತ್ತು ಬಳ್ಳಾರಿ ಜಿಲ್ಲೆಯ ಗಣಿ ಮಾಲೀಕರು ಜನಾರ್ದನ ರೆಡ್ಡಿಯನ್ನು ಎಲ್ಲವುದಕ್ಕೂ ಕಾರಣ ಎಂದು ದೂಷಿಸಿ ನಿಟ್ಟುಸಿರಾಗುತ್ತಿದ್ದಾರೆ. ಆತನ ಶಿಷ್ಯ ರಾದ ಗುಮ್ಮನೂರು ನಾಗೇಂದ್ರ, ಸುರೇಶ್‌ಬಾಬು, ಅಲೀ ಖಾನ್, ಖಾರಪುಡಿ ಮಹೇಶರಂಥವರಿಂದಾಗಿ ಕೆಲವು ಅಮಾಯಕರ ಬಾಯಿಗೂ ಮೊಸರನ್ನ ಮೆತ್ತಿಕೊಂಡಿದೆ.

ರಾಜಕಾರಣ ಬಲ್ಲ ಎಲ್ಲರೂ ಅಂದುಕೊಂಡಿದ್ದೆಂ ದರೆ, ಸಿಬಿಐ ಎಂಬ ಸಶಕ್ತ ಖಡ್ಗವನ್ನು ಬಳಸುವ ಮೂಲಕ ಸೋನಿಯಾ ಗಾಂ ಮೊದಲು ಜಗನ್ ಮೋಹನ ರೆಡ್ಡಿಯನ್ನು ಹಣಿಯುತ್ತಾಳೆ, ಆ ನಂತರ ಸಿಬಿಐ ಅಕಾರಿಗಳು ಜನಾರ್ದನ ರೆಡ್ಡಿಯನ್ನು ಮುಟ್ಟುತ್ತಾರೆ. ಹಾಗಂ ತಲೇ ಬಹುಶಃ ಜನಾರ್ದನ ರೆಡ್ಡಿಯೂ ಅಂದುಕೊಂಡಿ ದ್ದಿರಬೇಕು. ಆದರೆ ಮೊದಲ ಬೀಸು ಆತನಿಗೇ ಬಿದ್ದಿದೆ. ಇದು ಮುಂದೆ ಜರುಗಲಿರುವ 'ಜಗನ್ ಪರಾಭವ' ಪರ್ವದ ಮುನ್ನುಡಿಯಷ್ಟೆ.

ಇನ್ನು ರೆಡ್ಡಿ ತಂಡ ರಾಜಕೀಯವಾಗಿ, ನೈತಿಕವಾಗಿ, ಕಾನೂನು ರೀತ್ಯಾ ಬಳ್ಳಾರಿಯಲ್ಲಿ ಚೇತರಿಸಿಕೊಳ್ಳುವುದು ಕಷ್ಟವಿದೆ. ಸದ್ಯದಲ್ಲೇ ಚುನಾವಣಾ ನಿಯಮಗಳೂ ಬಿಗಿ ಯಾಗಿ ಬಿಟ್ಟರೆ ಅಲ್ಲಿಗೆ ಹಣ ಚೆಲ್ಲುವುದೂ ನಿಂತು ಹೋಗಿ ಗಣಿ ಸಾಮ್ರಾಜ್ಯ ಧೂಳು ಪಾಲಾಗಲಿದೆ. ಇಂದು ನಾಳೆ ಯೊಳಗಾಗಿ ಜನಾರೆಡ್ಡಿ ಜಾಮೀನು ಪಡೆದು ಹೊರ ಬರುವುದೂ ಅನುಮಾನವೇ. ಇನ್ನು ಬಳ್ಳಾರಿಯಲ್ಲಿ ಹಳೆಯ ಹಂತಕರನ್ನೂ, ಹೊಸ ಕಳ್ಳರನ್ನೂ ವಿರೋಸು ವಂಥ ಮೂರನೆಯ ಶಕ್ತಿಯೊಂದು ಹೊರ ಹೊಮ್ಮ ಬೇಕಿದೆ. ಅದು ಸಾಧ್ಯವೇ? -ರವಿ ಬೆಳಗೆರೆ

Read Archieves of 10 September, 2011
Kaamaraja Maarga Book
See for all books
TV Shows
 
Books & Coffee
 
Prathana School Prathana School
 
Photo Gallery
Ravi Photo

© Ravi Belagere.

My Books